ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

26 ವರ್ಷದ ಮಹಿಳೆ ಕೊಟ್ಟ ದೂರು ಆಧರಿಸಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸೋನಿಯಾ ಆಪ್ತ ಸಹಾಯಕ 71 ವರ್ಷದ ಪಿ ಪಿ ಮಾಧವನ್ ವಿರುದ್ಧ ಜೂನ್ 25ರಂದು ದೆಹಲಿಯ ಉತ್ತಮ ನಗರ ಪೊಲೀಸರಿಗೆ ದೂರು ನೀಡಿದ್ದರು.

ಐಪಿಸಿ ಸೆಕ್ಷನ್ 376 (ಅತ್ಯಾಚಾರ ಪ್ರಕರಣ) ಮತ್ತು 506ರಡಿ ಎಫ್‌ಐಆರ್ ದಾಖಲಾಗಿದೆ.

ಕೆಲಸ ಕೊಡಿಸುವುದಾಗಿ ಮತ್ತು ಮದ್ವೆ ಆಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಮತ್ತು ಪೊಲೀಸರಿಗೆ ದೂರು ನೀಡದಂತೆ ಬೆದರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಈಕೆಯ ಪತಿ ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು 2020ರಲ್ಲಿ ನಿಧನರಾಗಿದ್ದರು. ಪಕ್ಷ ಹೋರ್ಡಿಂಗ್ಸ್ಗಳನ್ನು ಕಟ್ಟುವ ಕೆಲಸವನ್ನು ಈಕೆಯ ಪತಿ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here