ಬೈಕಿನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಅದೇಶದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದು, ಈ ಆದೇಶ ರಾತ್ರಿಗೆ ಮಾತ್ರ ಅನ್ವಯಿಸಲಿದೆ ಎಂದು ಹೇಳಿದ್ದಾರೆ.
ಈ ಮೊದಲು ಬೈಕ್ನ ಹಿಂಬದಿ ಯುವಕರು/ಪುರುಷರು ಪ್ರಯಾಣಿಸುವಂತಿಲ್ಲ ಎಂದು ತಿಳಿಸಲಾಗಿತ್ತು. ಈ ಆದೇಶಕ್ಕೆ ವಿರೋಧ ಬಂದ ಬಳಿಕ ಅಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮಾತ್ರ ಈ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ. ಇದು ಪೂರ್ತಿ ದಿನ ಆದೇಶ ಇರಲ್ಲ, ವಿದ್ಯಾರ್ಥಿಗಳಿಗೆ ಸಮಸ್ಯೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ .
ಪ್ರಕರಣಗಳು ಸಂಜೆ ವೇಳೆ ನಡೆಯುವ ಕಾರಣ ಬ್ರೇಕ್ ಮಾಡಲು ಈ ಆದೇಶ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರಬಾರದು ಎಂದು ಅವರು ತಿಳಿಸಿದರು .ಅದರ ಜೊತೆ ನೈಟ್ ಕರ್ಪ್ಯೂ ಸಡಿಲ ಮಾಡುವ ಕಾರಣಕ್ಕೆ ಈ ಆದೇಶ ಮಾಡಲಾಗಿದೆ.
ಸದ್ಯ ಒಂದು ವಾರದ ಮಟ್ಟಿಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ರಾತ್ರಿ ವೇಳೆ ದಾಳಿ ಮಾಡುವುದನ್ನು ನಿಯಂತ್ರಿಸಲು ಇದನ್ನ ಜಾರಿ ಮಾಡಿದ್ದೇವೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರಿಗೆ ಇದರಿಂದ ಸಮಸ್ಯೆ ಇಲ್ಲ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.