ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದ ಶಿಕ್ಷಕ ಹಾಗೂ ಬಾಲಕಿ ಕಾಡಿನ ಮಧ್ಯೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿಲ್ಲ.
ಉತ್ತರ ಪ್ರದೇಶದ ಶಹರನಾಪುರದ 40 ವರ್ಷದ ಶಿಕ್ಷಕ 17 ವರ್ಷದ 9 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದ ಎನ್ನಲಾಗಿದೆ. ಈ ಇಬ್ಬರು ಇದೇ, ಸೆಪ್ಟಂಬರ್ 3 ರಂದು ನಾಪತ್ತೆಯಾಗಿದ್ದರು. ಇಂದು ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವಿಪಿನ್ ತಡ ಹೇಳಿಕೆ ನೀಡಿದ್ದಾರೆ.
ಸೆಪ್ಟಂಬರ್ 3 ರಂದು ಪೋಷಕರು ಬಾಲಕಿ ನಾಪತ್ತೆಯಾದ ಬಳಿಕ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹುಟುಕಾಟ ನಡೆಸಿದ್ದರು. ಆದರೆ, ಪತ್ತೆಯಾಗಿರಲಿಲ್ಲ. ಇಂದು ಪೊಲೀಸ್ ಒಬ್ಬರು ಕಾಡಿಗೆ ಹೋದಾಗ ವಾಸನೆ ಬಂದಿದೆ. ಈ ವಾಸನೆ ಇಡಿದು ಹೋದಾಗ ಶಿಕ್ಷಕ ಹಾಗೂ ಬಾಲಕಿಯ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಪತ್ತೆಯಾಗಿದೆ.
ಕಳೆದ 10 ದಿನಗಳ ಹಿಂದೆಯೇ ನೇಣು ಹಾಕಿಕೊಂಡಿರಬಹುದು ಎಂದು ಹೇಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ : Actress Deepa : ಯುವ ನಟಿ ದೀಪ ಆತ್ಮಹತ್ಯೆ