ಶಾಲಾ ಮಕ್ಕಳಿಗೆ ಬಟ್ಟೆ, ಶೂ-ಸಾಕ್ಸ್ ವಿತರಣೆಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಲು ಆದೇಶಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ, ಮಕ್ಕಳಿಗೆ ಇನ್ನು ಬಟ್ಟೆ ಶೂ ಸಾಕ್ಸ್ ನೀಡಿಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿದ್ಯಾರ್ಥಿಗಳು ಶಾಲೆಗೆ ಬರುವುದು ಶೂ-ಸಾಕ್ಸ್ಗಳಿಗಲ್ಲ ಎಂದು ಹೇಳಿಕೆ ನೀಡಿದ್ದರು.
ಈ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಶಿಕ್ಷಣ ಸಚಿವರ ಈ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು.
ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಸರ್ಕಾರ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ಹಾಗೂ ಬಟ್ಟೆ ನೀಡಲು ಹಣ ಬಿಡುಗಡೆಗೆ ಅನುಮೋದನೆ ನೀಡಿದೆ.
ಇಂದು ಬೆಳಿಗ್ಗೆ ಮುಖ್ಯಮಂಯ್ರಿ ಬಸವರಾಜ ಬೊಮ್ಮಾಯಿಯವರು ಮಕ್ಕಳಿಗೆ ಶೂ-ಸಾಕ್ಸ್ ನೀಡಲು ಸರ್ಕಾರದಿಂದ 132 ಕೋ.ರೂ ಬಿಡುಗಡೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಸರ್ಕಾರದಿಂದ 132 ಕೋ.ರು ಹಣ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಟ್ವಿಟ್ ಮಾಡಿದ್ದಅರೆ.
2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ
ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ (ಎಸ್‌ಡಿಎಂಸಿ) ಮೂಲಕ 'ಶೂ ಮತ್ತು ಸಾಕ್ಸ್' ಖರೀದಿಸಿ, ವಿತರಿಸಲು ರಾಜ್ಯ ಸರ್ಕಾರ ₹132 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದೆ.@CMofKarnataka— B.C Nagesh (Modi Ya Parivara) (@BCNagesh_bjp) July 8, 2022