ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರು ಸಂತಾಪ ಸೂಚಿಸಿದ್ದಾರೆ.
ಆತ್ಮೀಯ ಮಿತ್ರರಾಗಿದ್ದು, ಸುಗಮ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದು, ಸಹೃದಯಿ, ಸಜ್ಜನ ಶಿವಮೊಗ್ಗ ಸುಬ್ಬಣ್ಣ ನಮ್ಮನ್ನು ಅಗಲಿದ್ದಾರೆ. ಸಂಗೀತ ಕ್ಷೇತ್ರ ಒಬ್ಬ ದಿಗ್ಗಜರನ್ನು ಕಳೆದುಕೊಂಡಿದೆ. ನಮ್ಮ ಭಾವಪೂರ್ಣ ಶ್ರದ್ಧಾಂಜಲಿ
ಎಂದು ಸಂತಾಪ ಸೂಚಿಸಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶಿವಮೊಗ್ಗ ಸುಬ್ಬಣ್ಣ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ADVERTISEMENT
ADVERTISEMENT