ಡಿಸೆಂಬರ್ನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಉಚ್ಛಾಟಿತ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ಉಚ್ಛಾಟನೆ ಮಾಡಿದ್ದರಲ್ಲಿ ಹೊಸದೇನಿಲ್ಲ. ಉಚ್ಛಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಈ ಬೆಳವಣಿಗೆ ಮುಜುಗರ, ಅವಮಾನ ಎಂದು ನನಗೆ ಅನಿಸೋದಿಲ್ಲ. ಅವರು ನನ್ನ ವಿರುದ್ದ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ.
ಡಿಸೆಂಬರ್ನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಸ್ಪೀಕರ್ ಬಳಿ ಹೋದರೆ ಏನಾಗುತ್ತೆ, ವಿಪ್ ಉಲ್ಲಂಘನೆಯಾದರೆ ಸ್ಪೀಕರ್ ಕ್ರಮ ಕೈಗೊಳ್ಳಬಹುದು ಎಂದರು.