ADVERTISEMENT
ವಿಧಾನಸಭಾ ಚುನಾವಣಾ ಫಲಿತಾಂಶ ಅಧಿಕೃತ ಘೋಷಣೆ ಆಗುವುದಕ್ಕೂ ಮೊದಲೇ ಆತುರಕ್ಕೆ ಬಿದ್ದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿಯವರನ್ನು ಭೇಟಿಯಾದ ತೆಲಂಗಾಣ ಪೊಲೀಸ್ ಮಹಾನಿರ್ದೇಶಕರನ್ನು ಭಾರತೀಯ ಚುನಾವಣಾ ಆಯೋಗ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಡಿಜಿಪಿ ಅಂಜನಿ ಕುಮಾರ್ ಅವರನ್ನು ಹುದ್ದೆಯಿಂದ ಅಮಾನತು ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.
ಮತ ಎಣಿಕೆ ನಡೆಯುತ್ತಿರುವ ಹೊತ್ತಲ್ಲೇ ಮಧ್ಯಾಹ್ನ ೧೨ ಗಂಟೆ ೧೫ ನಿಮಿಷಕ್ಕೆ ರೇವಂತ್ ರೆಡ್ಡಿ ಅವರನ್ನು ಡಿಜಿಪಿ ಅಂಜನಿ ಕುಮಾರ್ ಅವರು ಭೇಟಿ ಮಾಡುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗ ತನ್ನ ಆದೇಶದಲ್ಲಿ ಹೇಳಿದೆ.
ಭೇಟಿ ವೇಳೆ ಡಿಜಿಪಿ ಜೊತೆಗಿದ್ದ ಉಳಿದಿಬ್ಬರು ಐಪಿಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ADVERTISEMENT