ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಳ್ಳಾರಿ ಮತ್ತು ಅನಂತಪುರಂ ಜಿಲ್ಲೆಯ ತಾಡಿಪತ್ರಿಯ 14 ಮಂದಿ ಸಂಬಂಧಿಗಳು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತೂಫಾನ್ ವಾಹನದಲ್ಲಿ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಆಗುವಾಗ ಅಪಘಾತ ನಡೆದಿದೆ.
ವೈಎಸ್ಆರ್ ಜಿಲ್ಲೆಯ ಕೊಂಡಾಪುರಂ ಮಂಡಲಂನ ಏಟೂರು ಗ್ರಾಮದ ಬಳಿ ತೂಫಾನ್ ವಾಹನಕ್ಕೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ತೂಫಾನ್ ವಾಹನದಲ್ಲಿದ್ದ ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರೇ ರಕ್ಷಿಸಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ವಿವರಗಳು ತಿಳಿದುಬರಬೇಕಿದೆ