ತಮ್ಮ ವಿರುದ್ಧ ಆರೋಪ ಮಾಡಿರುವ ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧ ಸಕ್ಷಮ ಪ್ರಾಧಿಕಾರಕ್ಕೆ ದೂರು ಕೊಡುವುದಾಗಿಯೂ ಮತ್ತು ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಆಯಕ್ತೆ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ.
ಡಿ ರೂಪಾ ಅವರ ಆರೋಪದ ಬಗ್ಗೆ ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮಾನಸಿಕ ಅಸ್ವಸ್ಥತೆ ಬಹುದೊಡ್ಡ ಸಮಸ್ಯೆ. ಅದನ್ನು ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಕೌನ್ಸಿಲಿಂಗ್ ಮೂಲಕ ಗುಣಪಡಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾನಸಿಕ ಅಸ್ವಸ್ಥತೆಗೆ ಒಳಗಾದರೆ ಅದು ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆ
ಎಂದು ಹೇಳುವ ಮೂಲಕ ಡಿ ರೂಪಾ ಅವರ ಮಾನಸಿಕ ಆರೋಗ್ಯದ ಬಗ್ಗೆ ರೋಹಿಣಿ ಸಿಂಧೂರಿ ಸಂಶಯ ವ್ಯಕ್ತಪಡಿಸಿದ್ದಾರೆ.
ADVERTISEMENT
ADVERTISEMENT