ADVERTISEMENT
ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ರೌಡಿಶೀಟರ್ ಪುನೀತ್ ಶೆಟ್ಟಿ ಎಂಬಾತನನ್ನು ಬಂಧಿಸಲಾಗಿದೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗೆ ಪುನೀತ್ ಶೆಟ್ಟಿ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದ. ಈತ ಶಕ್ತಿ ನಗರದ ನಿವಾಸಿ.
ಬಂಧಿತನಿಂದ ಪರವಾನಗಿ ಇರುವ ಪಿಸ್ತೂಲು ಹಾಗೂ 6 ಸಜೀವ ಗುಂಡು, ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈತನನ್ನು 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈತನ ವಿರುದ್ಧ ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ಇದೆ.
ADVERTISEMENT