ಸಂಗೊಳ್ಳಿ ರಾಯಣ್ಣರ ಫೋಟೋ ಹರಿದ ಪ್ರಕರಣ : ಓರ್ವನ ಬಂಧನ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ( Sangolli Rayanna ) ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.

ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಬಂಧಿತ ಆರೋಪಿ. ಪ್ರಕರಣ ಹಿನ್ನೆಲೆ ನೋಡುವುದಾದರೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ( Sangolli Rayanna )  ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‍ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು.

ಇದನ್ನೂ ಓದಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ ಎಂಇಎಸ್ ಪುಂಡರು

ಇತ್ತ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿ ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಗೋಕಾಕ್ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here