ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ.
ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹೇಳಿದ್ದಾರೆ.
ಈ ಮೂಲಕ ಕೆಲ ದಿನಗಳ ವಿರಾಮದ ನಂತರ ಕಾಂಗ್ರೆಸ್ನಲ್ಲೇ ಮುಂದಿನ ಸಿಎಂ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.
ಅಧಿಕಾರ ಹಂಚಿಕೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕರ್ನಾಟಕಕ್ಕೆ ಬಂದಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಎಚ್ಚರಿಕೆ ನೀಡಿದ್ದರು.
ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದು, ಎಸ್ಟಿ ಸಮುದಾಯಕ್ಕೆ ಸೇರಿದವರು.
ADVERTISEMENT
ADVERTISEMENT