2 ವಾರಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈಗಿರುವ 198 ವಾರ್ಡ್ಗಳಿಗೆ ಚುನಾವಣೆ ನಡೆಸುವಂತೆಯೂ ಸೂಚಿಸಿದೆ.
ಮಹಾರಾಷ್ಟç ಮತ್ತು ಮಧ್ಯಪ್ರದೇಶದಲ್ಲಿ ಸ್ಥಳೀಯ ಚುನಾವಣೆಗಳನ್ನು ನಡೆಸುವಂತೆ ತಾನು ನೀಡಿರುವ ಆದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾಕಿ ಇರುವ ಉಳಿದ ರಾಜ್ಯಗಳಿಗೂ ಅನ್ವಯ ಆಗುತ್ತದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಎಂ ಖಾನಿವಿಲ್ಕರ್, ನ್ಯಾಯಮೂರ್ತಿ ಎ ಎಸ್ ಓಕಾ ಮತ್ತು ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಅವರಿದ್ದ ಪೀಠ ಸೂಚಿಸಿದೆ.
ಈ ಬಗ್ಗೆ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ವಿಧಾನಸಭಾ ಚುನಾವಣೆಗೂ ಮೊದಲೇ ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಕ್ತಿ ಪ್ರದರ್ಶನದ ಜೊತೆಗೆ ಮಹಾನಗರಿಯಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿಗೆ ತನ್ನ ತಾಕತ್ತು ಪ್ರದರ್ಶನಕ್ಕೆ ಅವಕಾಶ ಸಿಗಲಿದೆ.
2015ರಲ್ಲಿ ನಡೆದಿದ್ದ ಚುನಾವಣೆಯಲ್ಲಿ 198 ವಾರ್ಡ್ಗಳ ಪೈಕಿ ಬಿಜೆಪಿ 100, ಕಾಂಗ್ರೆಸ್ 76 ಮತ್ತು ಜೆಡಿಎಸ್ 14 ವಾರ್ಡ್ಗಳನ್ನು ಗೆದ್ದುಕೊಂಡಿತ್ತು. ಆರಂಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು 7 ಮಂದಿ ಪಕ್ಷೇತರ ಕಾರ್ಪೋರೇಟರ್ಗಳ ನೆರವಿನಿಂದ ಸಮ್ಮಿಶ್ರ ಆಡಳಿತ ನಡೆಸಿದ್ದವು.
ಆದರೆ ಆ ಬಳಿಕ ಪಾಲಿಕೆ ಆಡಳಿತ ಬಿಜೆಪಿ ಪಾಲಾಯಿತು. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅಂದರೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಲ್ಲಿ ಆ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೆ ಬರುವ ಶಾಸಕರು, ಸಂಸದರು ಮತ್ತು ವಿಧಾನಪರಿಷತ್ ಸದಸ್ಯರಿಗೂ ಮತದಾನದ ಹಕ್ಕು ಇರುವ ಕಾರಣ ವಾರ್ಡ್ಗಳನ್ನು ಗೆಲ್ಲುವುದರ ಜೊತೆಗೆ ಶಾಸಕರು, ಸಂಸದರು ಮತ್ತು ಎಂಎಲ್ಸಿಗಳ ಬಲಾಬಲವೂ ನಿರ್ಣಾಯಕ.