ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ಸಂಬಂಧ ನಾಳೆ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.
ಹಿಜಾಬ್ ಧರಿಸಿ ಹೋಗದಂತೆ ನಿರ್ಬಂಧಿಸಿದ್ದ ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠದ ತೀರ್ಪು ಪ್ರಶ್ನಿಸಿ ಕೆಲವು ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ನ್ಯಾಯಮೂರ್ತಿ ಸುಧಾನ್ಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ಸೆಪ್ಟೆಂಬರ್ 22ರವರೆಗೆ ಸತತ 10 ದಿನ ಹಿಜಾಬ್ ಕುರಿತ ವಾದಿ-ಪ್ರತಿವಾದಿ ವಕೀಲರ ವಾದವನ್ನು ಆಲಿಸಿತ್ತು.