ADVERTISEMENT
ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಡಿಡಿಪಿಐ ಹೆಚ್ಕೆ ಪಾಂಡು ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ರಜೆ:
ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ರಜೆ:
ಉತ್ತರ ಕನ್ನಡ ಜಿಲ್ಲೆಯಲ್ಲೂ ನಾಳೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ರಜೆ:
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಯುಜಿ, ಪಿಜಿ, ITI, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ರಜೆ:
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ಆಯಾ ತಹಶೀಲ್ದಾರ್ಗಳು ನಾಳೆ ರಜೆ ಘೋಷಣೆ ಮಾಡಿದ್ದಾರೆ.
ADVERTISEMENT