ಸೆಲ್ಫಿ ಕ್ರೇಜ್ನಿಂದ (Selfie Craze) ಕಾಲುಜಾರಿ ನೀರಿಗೆ ಬಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ನಲ್ಲಿ ಈ ಘಟನೆ ನಡೆದಿದೆ. ರಾಯಚೂರಿನ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಮೃತರು.
ಪಿಕ್ನಿಕ್ಗಾಗಿ ಬಂದಿದ್ದ ವೇಳೆ ವಿದ್ಯಾರ್ಥಿಗಳು ಸೆಲ್ಫಿ (Selfie Craze) ತೆಗೆಯುವಾಗ ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು.
ನಿನ್ನೆ ಸಂಜೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಇದನ್ನೂ ಓದಿ : Maski : ಕಾಲುವೆಗೆ ಕಾರು ಉರುಳಿ ಮೂವರು ಜಲಸಮಾಧಿ