ಕನ್ನಡದ ಹಿರಿಯ ನಟಿ ಲೀಲಾವತಿ (Senior Actress Leelavathi) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಂದು ಇವರ ಇವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ.ಹರೀಶ್ ಭೇಟಿ ನೀಡಿ ಲೀಲಾವತಿಯವರ ಆರೋಗ್ಯ ವಿಚಾರಿಸಿದ್ದಾರೆ.
ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ : ಪುನೀತ್ ರಾಜ್ ಕುಮಾರ್ ನಿಧನರಾಗಿ 11ನೇ ದಿನ – ತರ್ಪಣ ಬಿಟ್ಟು ಪೂಜೆ ಸಲ್ಲಿಸಿದ ವಿನೋದ್ ರಾಜ್
ಲೀಲಾವತಿಯವರ (Senior Actress Leelavathi) ಅನಾರೋಗ್ಯದ ವಿಷಯ ತಿಳಿದ್ದಂತೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.
ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಅಭಿನಯ ಶಾರದೆ ಜಯಂತಿ ಇನ್ನಿಲ್ಲ