ADVERTISEMENT
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ನೀಡಲಾಗಿದ್ದ ಅಧ್ಯಯನ ರಜೆಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಕಳೆದ ವರ್ಷ ಜನವರಿ 11ರಿಂದ ಹೇಮಂತ್ ನಿಂಬಾಳ್ಕರ್ ಅವರಿಗೆ ಅಧ್ಯಯನ ರಜೆ ನೀಡಲಾಗಿತ್ತು.
ವಾರ್ತಾ ಮತ್ತು ಪ್ರಸಾರ ಇಲಾಖೆ ಆಯುಕ್ತರ ಹುದ್ದೆಯನ್ನು ದಕ್ಷಿಣ ವಲಯ, ಮೈಸೂರು ಐಜಿಪಿ ಹುದ್ದೆಗೆ ಸರಿಸಮಾನದ ಹುದ್ದೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ADVERTISEMENT