ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಆಕಾಂಕ್ಷಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಅನುಭವ ಹೊಂದಿರುವ 250 ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 250 ಸೀನಿಯರ್ ಮ್ಯಾನೇಜರ್- ಎಂಎಸ್ಎಂಇ ರಿಲೇಷನ್ಶಿಪ್ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ/ಮಾರ್ಕೆಟಿಂಗ್ ಮತ್ತು ಫೈನಾನ್ಸ್ ನಲ್ಲಿ ಎಂಬಿಎ ಪದವಿಯನ್ನು ಹೊಂದಿರಬೇಕು.
ಹುದ್ದೆ ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ಎಂಇ ಬ್ಯಾಂಕಿಂಗ್ ಜೊತೆಗೆ ಬ್ಯಾಂಕ್, ಎನ್ಬಿಎಫ್ಸಿ, ಫೈನಾನ್ಸ್ ನಲ್ಲಿ 8 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು. ಅಥವಾ ಕ್ರೆಡಿಟ್ ಮ್ಯಾನೇಜ್ಮೆಂಟ್, ರಿಲೇಷನ್ಶಿಪ್ ಆಫ್ ಎಕ್ಸಿಪಿರಿಯನ್ಸ್ ನಲ್ಲಿ 6 ವರ್ಷ ಹುದ್ದೆ ಅನುಭವ ಹೊಂದಿರಬೇಕು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 63,840-78,230 ರೂ. ಮಾಸಿಕ ವೇತನವನ್ನು ನಿಗದಿ ಮಾಡಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 28 ಮತ್ತು ಗರಿಷ್ಠ 37 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಮಾಡಲಾಗಿದೆ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಬಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಇದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಡಿಸೆಂಬರ್ 6 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರು ಆಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 26 ಡಿಸೆಂಬರ್ ಆಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಇತರೆ ಮಾಹಿತಿಗೆ ಅಭ್ಯರ್ಥಿಗಳು bankofbaroda.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.