ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ಗೆ ತಿರುವು – ಆಡಳಿತಾಧಿಕಾರಿ ವಿರುದ್ಧ ದೂರು

Muruga Math Chitradurga

ಶುಕ್ರವಾರ ಸಾಯಂಕಾಲ ಮೈಸೂರಿನಲ್ಲಿ ದಾಖಲಾದ ಚಿತ್ರದುರ್ಗದ ಮುರುಘಾ ಮಠದ (Muruga Math Chitradurga) ಶ್ರೀಗಳ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ನೂತನ ತಿರುವು ದೊರೆತಿದೆ.

ಇಂದು ಬೆಳಿಗ್ಗೆಯಷ್ಟೇ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಕ್ತಾಧಿಗಳು ಈ ಪ್ರಕರಣದ ಹಿಂದೆ ಮಠದ ಆಡಳಿತಾಧಿಕಾರಿ ಬಸವರಾಜ್ ಇದ್ದಾರೆ. ಅವರೇ, ಸುಳ್ಳು ಆರೋಪಿಗಳನ್ನು ಸೃಷ್ಠಿಸಿ ಈ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದರು.

ಇದೀಗ, ಮಠದ (Muruga Math Chitradurga) ಆಡಳಿತಾಧಿಕಾರಿಯಾಗಿ ಎಸ್​.ಕೆ.ಬಸವರಾಜನ್ ಹಾಗೂ ಆತನ ಪತ್ನಿ ಸೌಭಾಗ್ಯ ಬಸವರಾಜ್​ ವಿರುದ್ಧ ಮಹಿಳೆಯೊಬ್ಬರು  ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಮುರುಘಾ ಶರಣರ ವಿರುದ್ಧ FIR – ಮುರುಘಾ ಸ್ವಾಮೀಜಿ A1 ಆರೋಪಿ

ಆಡಳಿತಾಧಿಕಾರಿ ಬಸವರಾಜನ್ ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲಾತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕ ಹಾಕಿದ್ದರು ಎಂದು ಮಹಿಳೆ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ, ಅವರು ಮನೆಗೆ ತೆರಳದೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಆಡಳಿತಾಧಿಕಾರಿ ಬಸವರಾಜನ್ ಸಂಬಂಧಿಸಿದವರಿಗೆ ಮಾಹಿತಿ ನೀಡದೇ ಮಕ್ಕಳನ್ನು ಕರೆತಂದು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಮಧ್ಯೆ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಮೈಸೂರಿನ ಒಡನಾಡಿ ಸಂಸ್ಥೆ ಒತ್ತಾಯಿಸಿದೆ. ಮೈಸೂರಿನಲ್ಲಿ ದಾಖಲಾಗಿದ್ದ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ.

ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಯ ಶಿಕ್ಷಕನಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಗೌರವ

LEAVE A REPLY

Please enter your comment!
Please enter your name here