ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇರಳದ ರಾಜಕಾರಣ ಹಾಗೂ ಮಾಜಿ ಶಾಸಕ ಪಿ.ಸಿ.ಜಾರ್ಜ್ ಅವರನ್ನು ಇಂದು ಶನಿವಾರ ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳ ಸೋಲಾರ್ ಪ್ಯಾನಲ್ ಹಗರಣದ ಆರೋಪಿಗಳಲ್ಲಿ ಒಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಆಧಾರದಲ್ಲಿ ಜಾರ್ಜ್ ಅವರನ್ನು ಬಂಧಿಸಲಾಗಿದೆ.
ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಆರೋಪದ ಮೂಲಕ ಕೇರಳ ಮುಖ್ಯಮಂತ್ರಿ ಮತ್ತು ಸರ್ಕಾರದ ಮಾನಹಾನಿಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಅಪರಾಧ ವಿಭಾಗದ ಪೊಲೀಸರು ಜಾರ್ಜ್ ಅವರನ್ನು ತಿರುವನಂತಪುರದ ಗೆಸ್ಟ್ ಹೌಸ್ನಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಪೊಲೀಸರು ಜಾರ್ಜ್ ಅವರನ್ನು ಬಂಧಿಸಿದ್ದಾರೆ.
ಜಾರ್ಜ್ ವಿರುದ್ಧ ಐಪಿಸಿ ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.