ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ʻಶಕ್ತಿ ಯೋಜನೆʼಯಲ್ಲಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಭಾರೀ ಮೊತ್ತದ ಹಣವನ್ನು ಬಾಕಿ ಉಳಿಸಿಕೊಂಡಿದೆ.
2023-24ರ ಆರ್ಥಿಕ ವರ್ಷದಲ್ಲಿ ಶಕ್ತಿ ಯೋಜನೆಯಡಿಯಲ್ಲಿ 1, 180 ಕೋಟಿ ರೂಪಾಯಿ ಮತ್ತು ಈ ಆರ್ಥಿಕ ವರ್ಷದಲ್ಲಿ ಇಲ್ಲಿಯವರೆಗೆ 579 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ಪ್ರಮುಖ ಇಂಗ್ಲೀಷ್ ದೈನಿಕ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಕಳೆದ ವರ್ಷದ ಜೂನ್ 11ರಂದು ಕರ್ನಾಟಕದಲ್ಲಿ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆರಂಭವಾಗಿತ್ತು.
ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ಬರೋಬ್ಬರೀ 350 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರತಿದಿನದ ಪ್ರಯಾಣಿಕರ ಸರಾಸರಿ ಓಡಾಟ 85 ಲಕ್ಷದಿಂದ 1 ಕೋಟಿ 16 ಲಕ್ಷಕ್ಕೆ ಏರಿಕೆಯಾಗಿದೆ.
ADVERTISEMENT
ADVERTISEMENT