ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು ನೇಮಕವಾದ ಬೆನ್ನಲ್ಲೇ ವಿಜಯೇಂದ್ರ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಬಿಜೆಪಿಗೆ ಮುಖಭಂಗವಾಗಿದೆ.
ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮ ಪಂಚಾಯತಿಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಮಂಜಮ್ಮ ಜ್ಞಾನೇಶ್ ಉಪಾಧ್ಯಕ್ಷರಾಗಿ ಕುಮಾರ್ ನಾಯಕ್ ತಿಮ್ಲಾಪುರ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯತ್ನಲ್ಲಿ ಒಟ್ಟು16 ಸದಸ್ಯರು ಹೊಂದಿದ್ದು ಇದರಲ್ಲಿ ಎಂಟು ಬಿಜೆಪಿ, ಎಂಟು ಕಾಂಗ್ರೆಸ್ ಸದಸ್ಯರ ಸಮಬಲ ಹೊಂದಿದೆ.
ಕಾಂಗ್ರೆಸ್ ಪಕ್ಷದ ಬೆಂಬಲಿತ 14 ಸದಸ್ಯರು ಮತ ಚಲಾಯಿಸುವುದರ ಮೂಲಕ ಕಾಂಗ್ರೆಸ್ ಪಕ್ಷವು ಗ್ರಾಮ ಪಂಚಾಯಿತಿಯನ್ನು ತನ್ನ ತಕ್ಕೆಗೆ ಪಡೆಯಿತು.
ಚುನಾವಣಾ ಅಧಿಕಾರಿಯಾಗಿ ತಾಲೂಕಿನ ಶಿಕ್ಷಣಾಧಿಕಾರಿ ಶಶಿಧರ್ ನಿರ್ವಹಿಸಿದರು. ಅಧ್ಯಕ್ಷರಾಗಿ ಮಂಜಮ್ಮ ಜ್ಞಾನೇಶ್ ಉಪಾಧ್ಯಕ್ಷರಾಗಿ ಕುಮಾರ್ ನಾಯಕ್ ತಿಮ್ಲಾಪುರ ಆಯ್ಕೆಯಾದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ನಾಗರಾಜ್ ಗೌಡ, ಮಾರವಳ್ಳಿ ಉಮೇಶ್ ರಾಘವೇಂದ್ರ ನಾಯಕ್, ಶಿವು ನಾಯಕ್, ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು
ಈ ಸಂದರ್ಭ ಪಕ್ಷದ ಮುಖಂಡರಾದ ನಾಗರಾಜ್ ಗೌಡ ಅವರು ಮಾತನಾಡಿ ಶಿಕಾರಿಪುರ ತಾಲೂಕಿನ ಶಾಸಕರು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಕ್ಷೇತ್ರದಲ್ಲೇ ಬಿಜೆಪಿಗೆ ಮುಖಭಂಗವಾಗಿದೆ.
ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಮೇಲೆ ಶಿಕಾರಿಪುರದಲ್ಲಿ ಮೊದಲ ಸೋಲಾಗಿದ್ದು ಇನ್ನು ಮುಂದೆ ಎಲ್ಲಾ ಕ್ಷೇತ್ರದಲ್ಲೂ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ಮೊದಲಿಗೆ ತನ್ನ ಸ್ವಕ್ಷೇತ್ರದಿಂದಲೇ ಸೋಲು ಪ್ರಾರಂಭವಾಗಿದೆ. ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದರು.