ಶಿವಮೊಗ್ಗ ಏರ್ಪೋರ್ಟ್ನಲ್ಲಿ (Shivamogga Airport ) ವಿಮಾನ ಹಾರಾಟ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ.
ಜುಲೈ 20ರ ವೇಳೆಗೆ ಶಿವಮೊಗ್ಗ ವಿಮಾನನಿಲ್ದಾಣ ಸಜ್ಜಾಗಲಿದ್ದು, ಆಗಸ್ಟ್ 11ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ (Minister M B Patil) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದೆ.
ರಾಜ್ಯ ಸರ್ಕಾರದಿಂದ ನಿರ್ವಹಣೆಯಾಗಲಿರುವ ಮೊಟ್ಟಮೊದಲ ವಿಮಾನ ನಿಲ್ದಾಣ #ಶಿವಮೊಗ್ಗ ಏರ್ ಪೋರ್ಟನ್ನು ಜುಲೈ 20ರ ವೇಳೆಗೆ ಸಜ್ಜಗೊಳಿಸಿ, ಆಗಸ್ಟ್ 11ರಿಂದ ವಿಮಾನ ಹಾರಾಟ ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಇದೇವೇಳೆ ನಿರ್ಮಾಣ ಹಂತದಲ್ಲಿರುವ ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ವಿಮಾನ ನಿಲ್ದಾಣಗಳ ಪ್ರಗತಿಯ ಕುರಿತು ಚರ್ಚಿಸಿ, ಸೂಕ್ತ ನಿರ್ದೇಶನ ನೀಡಿರುವೆ.
ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತ, #KSIIDC ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಂ.ಆರ್.ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಪ್ರಕಾಶ್ ಉಪಸ್ಥಿತರಿದ್ದರು