ವಿಧಾನಸಭಾ ಚುನಾವಣೆ ಘೋಷಣೆಗೆ ನಾಲ್ಕೇ ತಿಂಗಳು ಬಾಕಿ ಇರುವಂತೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಪಟ್ಟಿ ಪ್ರಕಟಿಸಿದ್ದಾರೆ.
ಶಿವಮೊಗ್ಗ ಗ್ರಾಮೀಣ – ಶಾರದಾ ಪೂರ್ಯ ನಾಯಕ್
ಭದ್ರಾವತಿ – ಶಾರದಾ ಅಪ್ಪಾಜಿಗೌಡ – ದಿವಂಗತ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಪತ್ನಿ
ತೀರ್ಥಹಳ್ಳಿ – ರಾಜಾರಾಮ್
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಿಗಷ್ಟೇ ಜೆಡಿಎಸ್ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ.