ಕಿರೀಟಿ ಸಿನಿಮಾ ಸೆಟ್ ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವಣ್ಣ – ಸೆ.29ಕ್ಕೆ ಚಿತ್ರದ ಟೈಟಲ್ ರಿವೀಲ್

Kireeti

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಕಿರೀಟಿ (Kireeti) ನಟನೆಯ ಹೆಸರಿಡದ ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಈಗಾಗಲೇ ರಿಲೀಸ್ ಆಗಿರುವ ಕಿರೀಟಿ ಇಂಟ್ರೂಡಕ್ಷನ್ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕಿರೀಟಿ ಸಿನಿಮಾ ಸೆಟ್ ನಲ್ಲಿ ಶಿವಣ್ಣ :

ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಬ್ರೇಕ್ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್ ಪಾರ್ಕ್ ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಶೂಟಿಂಗ್ ಸೆಟ್ ಗೆ ದೊಡ್ಮನೆ ದೊರೆ ಶಿವಣ್ಣ ಸರ್ಪ್ರೈಸ್ ಆಗಿ ವಿಸಿಟ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕಿರೀಟಿ (Kireeti) ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲ ಕಾಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಡೀ ತಂಡ ಹಾಗೂ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ : ಹೀರೋ ಆಗಿ ಎಂಟ್ರಿ ಕೊಡಲಿದ್ದಾರೆ ಜನಾರ್ದನ ರೆಡ್ಡಿ ಪುತ್ರ ‘ಕಿರೀಟಿ’

ಕಿರೀಟಿ ಹುಟ್ಟುಹಬ್ಬಕ್ಕೆ ಶೀರ್ಷಿಕೆ ಅನಾವರಣ :

ಹೆಸರಿಡದ ಕಿರೀಟಿ ಚೊಚ್ಚಲ ಸಿನಿಮಾದ ಟೈಟಲ್ ಅನಾವರಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 29ಕ್ಕೆ ಕಿರೀಟಿ ಹುಟ್ಟುಹಬ್ಬವಿದೆ. ಈ ದಿನದಂದೂ ಟೈಟಲ್ ರಿವೀಲ್ ವಿಡಿಯೋ ಝಲಕ್ ರಿಲೀಸ್ ಮಾಡಲು ಯೋಜನೆ ಹಾಕಿಕೊಂಡಿದೆ. ಸದ್ಯ ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡುತ್ತಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

ಇದನ್ನೂ ಓದಿ : ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ – ಕಿರೀಟಿ ಸ್ಟಂಟ್..ಆಕ್ಟಿಂಗ್..ಡ್ಯಾನ್ಸ್​ಗೆ ರಾಜಮೌಳಿ ಮೆಚ್ಚುಗೆ

LEAVE A REPLY

Please enter your comment!
Please enter your name here