BJP ರಾಜ್ಯಾಧ್ಯಕ್ಷ ಸ್ಥಾನ: ಶೋಭಾ ಪರ ಯಡಿಯೂರಪ್ಪ ವಕಾಲತ್ತು

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಿಗುವ ಸಾಧ್ಯತೆ ಇದೆ.

ಶೋಭಾ ಕರಂದ್ಲಾಜೆ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ದೆಹಲಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಒಂದು ವೇಳೆ ಲಿಂಗಾಯತ ಸಮುದಾಯದ ಶಾಸಕರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಟ್ಟರೆ ಕರಂದ್ಲಾಜೆ ಅವರಿಗೆ ಒಕ್ಕಲಿಗ ಕೋಟಾದಡಿ ಅಧ್ಯಕ್ಷ ಸ್ಥಾನ ಕೊಡುವುದು ಸೂಕ್ತ ಎಂದು ಬಿಎಸ್​ವೈ ಸಲಹೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ವಿಪಕ್ಷ ನಾಯಕ ಸ್ಥಾನ ಮತ್ತು ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಸಂಬಂಧ ಅಭಿಪ್ರಾಯ ಕೇಳಿದ್ದರು.

ಕರಂದ್ಲಾಜೆ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷರಾದರೆ ಆಗ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯ ರಾಜಕಾರಣಕ್ಕೆ ಮರಳ ಬೇಕಾಗುತ್ತದೆ.

ಶೋಭಾ ಅವರು 2008ರಲ್ಲಿ ಯಡಿಯೂರಪ್ಪ ಸರ್ಕಾರದಲ್ಲಿ ಪಂಚಾಯತ್​ ರಾಜ್​ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಆದರೆ 2018ರ ಚುನಾವಣೆ ಬಳಿಕ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಶೋಭಾ ಅವರು ದೂರ ಇರುವಂತೆ ನೋಡಿಕೊಂಡಿದ್ದರು.

LEAVE A REPLY

Please enter your comment!
Please enter your name here