ಶ್ರವಣಬೆಳಗೊಳ ಪಟ್ಟಣದ ಸುಮಾರು 18 ಕುಟುಂಬಗಳಿಗೆ ಬುಧವಾರ ಶ್ರೀಕ್ಷೇತ್ರ ಶ್ರವಣಬೆಳಗೊಳ ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಹಾಯ ಧನ ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆಗಳು ಕುಸಿದು ನಿರಾಶ್ರಿತರಾದ ಶ್ರವಣಬೆಳಗೊಳ ವ್ಯಾಪ್ತಿಯ 18 ಸಂತ್ರಸ್ತರಿಗೆ ತಲಾ 5 ಸಾವಿರ ರೂಪಾಯಿ ಚೆಕ್ ಹಾಗೂ ಆಹಾರ ಸಾಮಗ್ರಿಗಳನ್ನು ನೀಡಿ ಸಹಕಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಎಸ್.ಬಿ.ಯಶಸ್, ದಿಗಂಬರ ಜೈನ ಸಮಾಜದ ಅಧ್ಯಕ್ಷ ಜಿ.ಪಿ.ಪದ್ಮಕುಮಾರ್, ಎಸ್.ಡಿ.ಜೆ.ಎಂ.ಐ.ಎಂ.ಸಿ. ಟ್ರಸ್ಟ್ ನ ಕಾರ್ಯಾಧ್ಯಕ್ಷ ಎಚ್.ಪಿ.ಅಶೋಕ್ ಕುಮಾರ್, ಮುಖ್ಯ ಕಾರ್ಯದರ್ಶಿ ಎಸ್.ಪಿ.ಮಹೇಶ್, ಜಿ.ಡಿ.ಪಾರ್ಶ್ವನಾಥ್, ಪಾರಸ್ ಸಿದ್ದಣ್ಣವರ್, ರೋಜು ಕುಮಾರ್ ಮುಂತಾದವರಿದ್ದರು.