ಸಿದ್ದರಾಮಯ್ಯರನ್ನು ಮತ್ತೆ ಸಿಎಂ ಆಗಿ ನೋಡಬೇಕು

SIDDARAMAIAH
SIDDARAMAIAH
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ನಾವು ಮತ್ತೊಮ್ಮೆ ಸಿಎಂ ಆಗಿ ನೋಡಬೇಕು ಎಂದು ಕೊಪ್ಪಳ ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ್ (Raghavendra Hitnal)​ ಹೇಳಿದ್ದಾರೆ.
ಮುಂದಿನ ದಿನಮಾನಗಳಲ್ಲಿ ಇನ್ನೂ ಕೆಟ್ಟ ಪರಿಸ್ಥಿತಿ ಬರ್ತಾ ಇದ್ದಾವೆ, ನಾವು ಜಾಗೃತರಾದಾಗ ಮಾತ್ರ ಮತ್ತೆ ನಾವು ಈ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಸಾಹೇಬರನ್ನು ನೋಡಲು ಸಾಧ್ಯ.
ಎಂದು ಕೊಪ್ಪಳ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದ ಹಾಲಮತ ಸಮುದಾಯದ ಕಾರ್ಯಕ್ರಮದಲ್ಲಿ ಹಿಟ್ನಾಳ್​ ಹೇಳಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಹಿಟ್ನಾಳ್​ ಅವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದಿದ್ದರು.

LEAVE A REPLY

Please enter your comment!
Please enter your name here