BIG BREAKING:ಭಾನುವಾರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ

ಕರ್ನಾಟಕದ ಮುಖ್ಯಮಂತ್ರಿ ಆಗಿ ಇದೇ ಭಾನುವಾರ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಯಾರಾಗಬೇಕೆಂಬ ಕಗ್ಗಂಟು ಬಗೆಹರಿದಿದೆ.

ಇವತ್ತು ಸಂಜೆ ಬೆಂಗಳೂರಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುತ್ತದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.