ಪ್ರಮಾಣವಚನ ಬಳಿಕ ನಾಳೆಯೇ ಗ್ಯಾರಂಟಿ ಜಾರಿ ಬಗ್ಗೆ ಘೋಷಣೆ

ನಾಳೆಯೇ ಕಾಂಗ್ರೆಸ್​ ಐದು ಗ್ಯಾರಂಟಿಗಳ ಜಾರಿ ಬಗ್ಗೆ ಕಾಂಗ್ರೆಸ್​ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

ನಾಳೆ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮತ್ತು 30 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಾಳೆ ಪ್ರಮಾಣವಚನದ ಬಳಿಕ ಮಧ್ಯಾಹ್ನ 1.30ಕ್ಕೆ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದೆ.

ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳ ಘೋಷಣೆಗಳ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಳಿಕ ಸುದ್ದಿಗೋಷ್ಠಿ ಮೂಲಕ ಗ್ಯಾರಂಟಿ ಜಾರಿ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್​ ಹೇಳಿತ್ತು.

ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳು:

1. ಪ್ರತಿ ಕುಟುಂಬದ ಒಬ್ಬ ವ್ತಕ್ತಿಗೆ ತಲಾ 10 ಕೆಜಿ ಅಕ್ಕಿ

2. ಪ್ರತಿ ಕುಟುಂಬದ ಮಹಿಳಾ ಯಜಮಾನಿಯ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ

3. ಪ್ರತಿ ಕುಟುಂಬಕ್ಕೆ 200 ಯುನಿಟ್​ ಉಚಿತ ವಿದ್ಯುತ್​

4. ಪ್ರತಿ ಮಹಿಳೆಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ

5. ನಿರುದ್ಯೋಗಿ ಯುವ ಪದವೀಧರರಿಗೆ ತಿಂಗಳಿಗೆ 3 ಸಾವಿರ ಮತ್ತು ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ.

ಈ ಐದು ಗ್ಯಾರಂಟಿಗಳ ಜಾರಿಯ ಸ್ವರೂಪ, ಈ ಗ್ಯಾರಂಟಿಗಳ ಲಾಭ ಪಡೆಯಲು ನಿಯಮ, ನೋಂದಣಿ, ಸಂಪನ್ಮೂಲ ವ್ಯವಸ್ಥೆ ಬಗ್ಗೆ ಸಂಪುಟ ಸಭೆಯ ಬಳಿಕ ವಿವರಣೆ ನೀಡುವ ನಿರೀಕ್ಷೆ ಇದೆ.