ADVERTISEMENT
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶಿಸಿದೆ.
ಈ ಮೂಲಕ ಚುನಾವಣಾ ಸೋಲಿನ ಆಘಾತದಲ್ಲಿರುವ ಬಿಜೆಪಿಗೆ ಸಿದ್ದರಾಮಯ್ಯ ಸರ್ಕಾರ ಆಘಾತ ನೀಡಿದೆ.
ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಮತ್ತು ಇಲಾಖೆಗಳ ಆಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನೂ ಸಹ ತಡೆ ಹಿಡಿಯಲು ತಿಳಿಸಲಾಗಿದೆ
ಎಂದು ಆರ್ಥಿಕ ಮತ್ತು ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಡಾ ಏಕ್ರೂಪ್ ಕೌರ್ ಆದೇಶಿಸಿದ್ದಾರೆ.
ADVERTISEMENT