ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿಯಲ್ಲಿದ್ದ ಎರಡು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಿದ್ದಾರೆ.
ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಯನ್ನು ಸಚಿವ ಎಂ ಬಿ ಪಾಟೀಲ್ ಅವರಿಗೆ ನೀಡಿದ್ದಾರೆ.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ್ದಾರೆ.
ಎಂ ಬಿ ಪಾಟೀಲ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರೂ ಹೌದು.
ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರೂ ಹೌದು.
ADVERTISEMENT
ADVERTISEMENT