ಅಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟು ಹಬ್ಬದ “ಸಿದ್ದರಾಮಯ್ಯ ಅಮೃತ ಮಹೋತ್ಸವ” ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ.
ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳಾದ ಮಾಜಿ ಸಚಿವರಾದ ಹೆಚ್ ಸಿ ಮಹದೇವಪ್ಪ, ಬಸವರಾಜ್ ರಾಯರೆಡ್ಡಿ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ತೆರಳಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಅಗಸ್ಟ್ 3 ರಂದು ಮಾಜಿ ಸಿಎಂ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟು ಹಬ್ಬದ ಬೃಹತ್ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ 10 ಲಕ್ಷ ಜನ ಸೇರಬಹುದು ಎಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಅಂದಾಜಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಸಮಾರಂಭಕ್ಕೆ ಹಾಜರಾಗಲಿದ್ದಾರೆ.