ಬಿಜೆಪಿ ಸರ್ಕಾರದಲ್ಲಿ ಅವಧಿಯಲ್ಲಿ ಮಂಜೂರಾದ 20 ಸಾವಿರ ಕೋಟಿ ರೂಪಾಯಿ ಮೊತ್ತದ ನೀರಾವರಿ ಕಾಮಗಾರಿಗಳಿಗೆ ತುರ್ತು ತಡೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ನೀರಾವರಿ ಇಲಾಖೆಯ ನಿಗಮಗಳಾದ ವಿಶ್ವೇಶ್ವರಯ್ಯ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ, ಕೃಷ್ಣಾ ಭಾಗ್ಯ ಜಲ ನಿಗಮ ಮೂಲಕ ಕರೆಯಲಾಗಿರುವ 20 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿ ತಕ್ಷಣವೇ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕಾಮಗಾರಿ ಅವೈಜ್ಞಾನಿಕವಾಗಿದೆ, ಕಾಮಗಾರಿಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ, ಟೆಂಡರ್ ನಿಯಮ ಉಲ್ಲಂಘಿಸಿ ಟೆಂಡರ್ ನೀಡಲಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸೂಕ್ತ ಪರಿಶೀಲನೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಪ್ರಾರಂಭ ಆಗದಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಈಗ ಕರೆದಿರುವ ಟೆಂಡರ್ಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ.
ಬಿಜೆಪಿ ಶಾಸಕರಿಂದಲೇ ದೂರು:
ಸಿಎಂ ಬೊಮ್ಮಾಯಿ ಸರ್ಕಾರದಲ್ಲಿ ನೀರಾವರಿ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದೆ ಎಂದು ಫೆಬ್ರವರಿ 3ರಂದು ಬಿಜೆಪಿ ಶಾಸಕರಾ್ಗಿದ್ದ ಗೂಳಿಹಟ್ಟಿ ಶೇಖರ್ ಅವರು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದರು.
ಎಲ್ಲ ನಿಗಮಗಳ ಆಡಳಿತ ಮಂಡಳಿಗಳ ಒಂದೇ ಸಭೆಯನ್ನು ನಡೆಸಿ ತರಾತುರಿಯಲ್ಲಿ 18 ಸಾವಿರ ಕೋಟಿ ರೂಪಾಯಿ ಮೊತ್ತದ ಟೆಂಡರ್ಗೆ ಅನುಮತಿ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಹೊಸದುರ್ಗ, ಕಡೂರು, ಜಗಳೂರು ತಾಲೂಕುಗಳಿಗೆ ನೀರು ಪೂರೈಸುವ ಕಾಮಗಾರಿ ಕಳಪೆಯಾಗಿದ್ದು, ಕಳಪೆ ಪೈಪ್ಗಳನ್ನು ಬಳಸಲಾಗಿದೆ