ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ, ಅವರು ಕೊಟ್ಟ ಅನುದಾನದಿಂದ ಶಾಸಕನಾದೆ: BJP ಶಾಸಕನ ಹೇಳಿಕೆ

ಸಿದ್ದರಾಮಯ್ಯರ ಸರ್ಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್​ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.

2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ನೀಡುತ್ತೇನೆ

ಎಂದು ಮಾಜಿ ಸಚಿವ ಎಸ್​ ಟಿ ಸೋಮಶೇಖರ್​ ಘೋಷಿಸಿದರು.