ಶನಿವಾರ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ಅವರು ಮೊದಲ ದಿನದಿಂದಲೇ ಜನ ಸಾಮಾನ್ಯರ ಮುಖ್ಯಮಂತ್ರಿ ಆಗುವತ್ತ ಗಮನಹರಿಸಿದ್ದಾರೆ. ಸಿಎಂ ಎಂದರೇ ಚೀಫ್ ಮಿನಿಸ್ಟರ್ ಅಷ್ಟೇ ಅಲ್ಲ ಕಾಮನ್ ಮ್ಯಾನ್ ಸಹ ಎಂಬುದನ್ನು ಸಿದ್ದರಾಮಯ್ಯ ನಿರೂಪಿಸಲು ಹೊರಟಂತೆ ಕಾಣುತ್ತಿದೆ. ಆರಂಭದಿಂದಲೇ ಕ್ರಾಂತಿಕಾರಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಜೀರೋ ಟ್ರಾಫಿಕ್ ಸಿಸ್ಟಮ್ ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹಾರ ತುರಾಯಿ ಪದ್ಧತಿಗೆ ಬ್ರೇಕ್ ಹಾಕಿದ್ದಾರೆ.
ಇನ್ಮುಂದೆ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ ಆಗುತ್ತದೆ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ತಮಗೆ ಪುಸ್ತಕಗಳನ್ನು ನೀಡಬಹುದು ಎಂದು ಸಿದ್ದರಾಮಯ್ಯ ಕೋರಿದ್ದಾರೆ..
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ತೆಗೆದುಕೊಂಡ ಎರಡೂ ನಿಲುವುಗಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ