ADVERTISEMENT
ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಶನಿವಾರ ವಿಸ್ತರಣೆ ಆಗಲಿದೆ.
ಶನಿವಾರ ರಾಜಭವನದಲ್ಲಿ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಮೂಲಕ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ಭರ್ತಿ ಆಗಲಿದೆ.
ನಿಯಮಗಳ ಪ್ರಕಾರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಒಳಗೊಂಡು 34 ಮಂದಿ ಸಚಿವರಾಗಲು ಅವಕಾಶವಿದೆ.
ಕಳೆದ ಶನಿವಾರ ಮೇ 20ರಂದು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾಗಿ ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಡಾ ಜಿ ಪರಮೇಶ್ವರ್, ಕೆ ಹೆಚ್ ಮುನಿಯಪ್ಪ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದರು.
ADVERTISEMENT