ಕೊಲೆಯಾದ BJP ಕಾರ್ಯಕರ್ತ ಸೇರಿ ನಾಲ್ವರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾಗಿದ್ದ ನಾಲ್ವರು ಯುವಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಹಾರ ಘೋಷಿಸಿದೆ.

ಪೊಲೀಸ್ ಮಹಾನಿರ್ದೇಶಕರು ಒಳಾಡಳಿತ ಇಲಾಖೆಗೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗಿದೆ.

ನಾಲ್ವರ ಕುಟುಂಬಗಳಿಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ವಿತರಿಸಲಾಗುತ್ತದೆ.

ಜೂನ್ 19ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.

ಯಾರು ಕುಟುಂಬಕ್ಕೆಲ್ಲ ಪರಿಹಾರ..?

1. ಮಸೂದ್

2. ಮೊಹಮ್ಮದ್ ಫಾಸಿಲ್

3. ಅಬ್ದುಲ್ ಜಲೀಲ್

4. ದೀಪಕ್ ರಾವ್ – ಜನವರಿ 3, 2018ರಂದು ಕೊಲೆಯಾದ ಬಿಜೆಪಿ ಕಾರ್ಯಕರ್ತ