BIG BREAKING: ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸಲ್ಲ ಸಿದ್ದರಾಮಯ್ಯ..? ಹಿಂದೆ ಸರಿದ ಮಾಜಿ ಸಿಎಂ..?

ಸಿದ್ದರಾಮಯ್ಯ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಈ ಬಾರಿ ಸಿದ್ದರಾಮಯ್ಯ ಅವರು ತಮ್ಮ ತವರು ಕ್ಷೇತ್ರ ವರುಣಾದಿಂದಲೇ ಸ್ಪರ್ಧೆ ಮಾಡುವ ನಿರೀಕ್ಷೆ ಇದೆ.

ವರುಣಾದಿಂದಲೇ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಕೋಲಾರದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಜನವರಿ 9ರಲ್ಲಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಆದರೆ ಅಂತಿಮ ನಿರ್ಧಾರ ಹೈಕಮಾಂಡ್​​ಗೆ ಬಿಟ್ಟಿದ್ದು ಎಂದು ಹೇಳಿದ್ದರು.

ವರುಣಾದಲ್ಲಿ ಸದ್ಯ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಶಾಸಕರಾಗಿದ್ದು ತಂದೆ ಸ್ಪರ್ಧಿಸಿದರೆ ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ.

LEAVE A REPLY

Please enter your comment!
Please enter your name here