ADVERTISEMENT
ಬೇಸಿಗೆಯಲ್ಲಿ ರೈತರಿಗೆ ನೀಡುತ್ತಿದ್ದ 1 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನವನ್ನು ಮುಂದುವರೆಸುವಂತೆ ಹಾಲು ಒಕ್ಕೂಟಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು.
ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಮೇವು ಕೊರತೆ ಹಿನ್ನೆಲೆಯಲ್ಲಿ ಪ್ರೋತ್ಸಾಹಧನ ಹೆಚ್ಚಳ:
ಬೇಸಿಗೆಯಲ್ಲಿ ಮೇವು ಕೊರತೆ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಸಹಕಾರಿಯಾಗುವಂತೆ ಹಾಲು ಒಕ್ಕೂಟಗಳು ಲೀಟರ್ಗೆ 1 ರಿಂದ 1.5 ರೂಪಾಯಿವರೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹಧನ ಘೋಷಿಸಿದ್ದವು.
ಈಗ ಮುಂಗಾರು ಮಳೆ ಶುರುವಾಗಿರುವ ಕಾರಣ ಮೇವಿನ ಕೊರತೆ ಇಲ್ಲದಿರುವ ಕಾರಣ ಆ ಪ್ರೋತ್ಸಾಹಧನವನ್ನು ಕಡಿತಗೊಳಿಸಿ ಹಾಲು ಒಕ್ಕೂಟಗಳು ಹೊಸ ಆದೇಶ ಹೊರಡಿಸಿದ್ದವು.
ADVERTISEMENT