ನನಗೆ ಝೀರೋ ಟ್ರಾಫಿಕ್ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಸಿದ್ದರಾಮಯ್ಯನವರು ಈ ಆದೇಶ ಹೊರಡಿಸಿರುವುದು ವಿಶೇಷ.
ಮುಖ್ಯಮಂತ್ರಿಗಳಿಗೆ ನೀಡಲಾಗುವ ಝೀರೋ ಟ್ರಾಫಿಕ್ ಆದೇಶವನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.
ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಈ ನಿರ್ಧಾರ ಸಂಪುಟದ ಎಲ್ಲ ಸಚಿವರಿಗೂ ಮಾದರಿ ಆಗಲಿದೆ.
ಸಿಎಂ ಓಡಾಟದ ಕಾರಣದಿಂದ ಬೆಂಗಳೂರಲ್ಲಿ ಸಾರ್ವಜನಿಕರು ಅನುಭವಿಸುವ ಕಿರಿಕಿರಿ ಸಿದ್ದರಾಮಯ್ಯನವರ ಈ ನಿರ್ಧಾರದಿಂದ ತಪ್ಪಲಿದೆ.
ADVERTISEMENT
ADVERTISEMENT