ಸಚಿವ ಉಮೇಶ್ ಕತ್ತಿಯವರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ರಾಜ್ಯದ ನಾಡು ನುಡಿಗೆ ಬಗೆವ ದ್ರೋಹ. ಕರ್ನಾಟಕ ವಿಭಜನೆ ಚರ್ಚೆ ಪ್ರಧಾನಿ ಮೋದಿಯವರ ಮಟ್ಟದಲ್ಲಿ ನಡೆಯುತ್ತಿರುವುದು ಅಘಾತಕಾರಿ ಸಂಗತಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ನರೇಂದ್ರ ಮೋದಿ ಅವರ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು
ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು.
ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ @narendramodi ಅವರ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ @BSBommai ಅವರು ಸ್ಪಷ್ಟಪಡಿಸಬೇಕು. 1/4#ಕರ್ನಾಟಕ pic.twitter.com/Cnln1dBxdt
— Siddaramaiah (@siddaramaiah) June 23, 2022
ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ
ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲಸಲವೇನಲ್ಲ.
ಭಾಷಾ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಬಿಜೆಪಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ. 3/4#ಕರ್ನಾಟಕ pic.twitter.com/eCBkkbwMuW
— Siddaramaiah (@siddaramaiah) June 23, 2022