ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 2022 ರ ಮಹಿಳೆಯರ ಸಿಂಗಲ್ಸ್ ಫೈನಲ್ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಅಮೋಘ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಚೀನಾದ ವಾಂಗ್ ಝಿ ಯಿ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಭರ್ಜರಿ ಪ್ರದರ್ಶನ ನೀಡಿ ಗೆಲುವಿನ ಕೇಕೆ ಹಾಕಿದ್ದಾರೆ.
ವಾಂಗ್ ಝಿ ಯಿ ಮತ್ತು ಪಿವಿ ಸಿಂಧೂ ನಡೆದ ನಡೆದ ಬ್ಯಾಡ್ಮಿಂಟನ್ ಬಹಳಷ್ಟು ರೋಚಕ ತಿರುವುಗಳನ್ನು ಪಡೆದಿತ್ತು.
ಮೊದಲ ಸುತ್ತಿನಲ್ಲಿ ಭಾರತದ ಪಿವಿ ಸಿಂಧು ಚೀನಾದ ವಾಂಗ್ ಝಿ ಯಿ ವಿರುದ್ಧ 21-9 ರ ಅಂತರದ ಗೆಲುವು ಸಾಧಿಸಿದ್ದರು. ಆದರೆ, ಎರಡನೇ ಸುತ್ತಿನಲ್ಲಿ 11-21 ರ ಅಂತದರಿಂದ ಸೋಲು ಕಂಡಿದ್ದರು.
ಮೊದಲೆರಡು ಸೆಟ್ಗಳಲ್ಲಿ ಇಬ್ಬರಿಂದಲೂ ಭರ್ಜರಿ ಪ್ರದರ್ಶನ ಮೂಡಿಬಂದಿದ್ದ ಕಾರಣ ಅಂತಿಮ ಸೆಟ್ನಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಅಂತಿಮವಾಗಿ 3 ನೇ ಸುತ್ತಿನಲ್ಲಿ 21-15 ರ ಅಂತರದಿಂದ ಗೆಲ್ಲುವ ಮೂಲಕ ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದರು.
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಈ ವರ್ಷ ಸೈಯದ್ ಮೋದಿ ಇಂಟರ್ನ್ಯಾಶನಲ್ ಮತ್ತು ಸ್ವಿಸ್ ಓಪನ್ನಲ್ಲಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.