ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಜಾರಿ ನಿರ್ದೇಶನಾಲಯ ಕಾಂಗ್ರೆಸ್ಗೆ ಆಘಾತ ನೀಡಿದೆ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಿರ್ದೇಶಕರಾಗಿರುವ ಅಸೋಸಿಯೇಟೆಡ್ ಜರ್ನಲ್ ಮತ್ತು ಯಂಗ್ ಇಂಡಿಯಾಕ್ಕೆ ಸೇರಿದ ಅಪಾರ ಪ್ರಮಾಣದ ಆಸ್ತಿಯನ್ನು ಜಪ್ತಿ ಮಾಡಿಕೊಂಡಿದೆ.
ಎಜೆಎಲ್ಗೆ ಸೇರಿದ 752 ಕೋಟಿ ರೂಪಾಯಿ ಮೊತ್ತದ ಸ್ಥಿರಾಸ್ತಿ ಮತ್ತು ಯಂಗ್ ಇಂಡಿಯಾಕ್ಕೆ ಸೇರಿದ 90 ಕೋಟಿ ರೂಪಾಯಿ ಮೊತ್ತದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿಕೊಂಡಿದೆ.
ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡ ಆಸ್ತಿಗಳಲ್ಲಿ ನವದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ಗೆ ಸೇರಿದ ಕಟ್ಟಡ, ಲಕ್ನೋದಲ್ಲಿರುವ ನೆಹರು ಭವನ, ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಟ್ಟಡವೂ ಸೇರಿದೆ.
ADVERTISEMENT
ADVERTISEMENT