ಶ್ರೀಲಂಕಾದಲ್ಲಿ ಇಂದು ಪ್ರತಿಭಟನಾಕಾರರು ಅಧ್ಯಕ್ಷರ ಮನೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ನಂತರ ಶ್ರೀಲಂಕಾ ಪ್ರಧಾನಿ ರನೀಲ್ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ನಾಗರೀಕರ ಸುರಕ್ಷತೆಗಾಗಿ ಪಕ್ಷದ ಹಿರಿಯ ನಾಯಕರ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ. ಎಲ್ಲಾ ಪಕ್ಷಗಳ ಮೈತ್ರಿ ಸರ್ಕಾರವನ್ನು ದೇಶದಲ್ಲಿ ಸ್ಥಾಪಿಸಲಾಗುವುದು. ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
To facilitate this I will resign as Prime Minister.
— Ranil Wickremesinghe (@RW_UNP) July 9, 2022
ಶ್ರೀಲಂಕಾ ದೇಶದ ಕಳೆದ 70 ವರ್ಷಗಳಲ್ಲಿ ಎಂದೂ ಕೇಳರಿಯದ ಆರ್ಥಿಕ ತುರ್ತು ಪರಿಸ್ಥಿತಿಗೆ ಒಳಗಾಗಿದೆ. ದೇಶಾದ್ಯಂತ ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಯುತ್ತಲೇ ಇವೆ. ವಿದೇಶಿ ವಿನಿಮಯ ಕರೆನ್ಸಿಯ ಕೊರತೆಯಿಂದ ದೇಶ ಆಹಾರ, ಇಂಧನ, ಮೆಡಿಸಿನ್ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಲಾಗುತ್ತಿಲ್ಲ.
ಇಂದು ಶ್ರೀಲಅಂಕದ ಸಾವಿರಾರು ಜನ ದೇಶದ ಅಧ್ಯಕ್ಷ ಗೋಟಬಯ ರಾಜಪಕ್ಷೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದರು. ಈ ಹಿನ್ನೆಲೆಯಲ್ಲಿ, ಮುಂದಿನ ಶ್ರೀಲಂಕಾದ ಅಧ್ಯಕ್ಷರೆಂದೇ ಗುರುತಿಸಿಕೊಂಡಿರುವ ರನೀಲ್ ವಿಕ್ರಮಸಿಂಘೆಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಎಲ್ಲಾ ಪಕ್ಷಗಳ ಮೈತ್ರಿಯ ಸರ್ಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ.