ADVERTISEMENT
ನಾಲ್ಕು ರಾಜ್ಯಗಳಿಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸಿದೆ.
ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ತೆಲಂಗಾಣ ಬಿಜೆಪಿ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ.
ಬಂಡಿ ಸಂಜಯ್ ಕುಮಾರ್ ಅವರನ್ನು ಕೆಳಗಿಳಿಸಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.
ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಡಿ ಪುರಂದೇಶ್ವರಿ ಅವರನ್ನು ನೇಮಿಸಲಾಗಿದೆ.
ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸುನಿಲ್ ಜಾಖರ್ ಅವರನ್ನು ನೇಮಿಸಲಾಗಿದ್ದು, ಜಾರ್ಖಂಡ್ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಅವರನ್ನು ನೇಮಿಸಲಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನ ಬಳಿಕ ಜಾಖಡ್ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.
ಕಾಂಗ್ರೆಸ್ನಿಂದ ವಲಸೆ ಬಂದಿರುವ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ADVERTISEMENT