ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಮಾಡಲಿದ್ದಾರೆ. ಒಂದು ವೇಳೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ಗೆ ಬಿಟ್ಟುಕೊಟ್ಟರೂ ಸುಮಲತಾ ಅವರು ಮಂಡ್ಯದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ಸುಮಲತಾ ಅವರ ಆಪ್ತ ಹನಕೆರೆ ಶಶಿಕುಮಾರ್ ಅವರು ಹೇಳಿದ್ದಾರೆ.
ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ. ನಾಲ್ಕು ವರ್ಷದಿಂದ ಸುಮಲತಾ ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲೂ ಮಂಡ್ಯದಿಂದ ಸುಮಲತಾ ಅವರೇ ಅಭ್ಯರ್ಥಿ ಆಗಿರುತ್ತಾರೆ. ಎಲ್ಲಾ ಹೋರಾಟಗಳಲ್ಲೂ ಸುಮಲತಾ ಮುಂಚೂಣಿಯಲ್ಲಿದ್ದು, ಅತಿ ಹೆಚ್ಚು ದಿಶಾ ಸಭೆ ನಡೆಸಿದ ಹೆಗ್ಗಳಿಕೆ ಸುಮಲತಾ ಅವರದ್ದು.
ಸುಮಲತಾ ಈಗಲೂ ಪಕ್ಷೇತರ ಸಂಸದೆ, ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಪಕ್ಷ ಯಾವುದಾದರೂ ಸುಮಲತಾ ಅವರು ಮಂಡ್ಯ ಅಭ್ಯರ್ಥಿ ಆಗಿರಬೇಕು. ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡಿದರೂ ನಮ್ಮ ಬೆಂಬಲ ಇರುತ್ತದೆ.
ಜೆಡಿಎಸ್ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟರೂ ಸುಮಲತಾ ಅಂಬರೀಶ ಸ್ಪರ್ಧೆ ಖಚಿತವಾಗಿದೆ. ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸವಿದೆ. ಸುಮಲತಾ ಅವರ ಅವಶ್ಯಕತೆ ಇದ್ದರೆ ಮಂಡ್ಯ ಕ್ಷೇತ್ರ ಉಳಿಸಿಕೊಳ್ಳುತ್ತಾರೆ
ಎಂದು ಹನಕೆರೆ ಶಿವಕುಮಾರ್ ಅವರು ಹೇಳಿದ್ದಾರೆ.
ಅಂಬರೀಶ್ರವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ರಾಜಕೀಯದಲ್ಲಿ ಬದಲಾವಣೆ ಗಾಳಿ ಯಾವಾಗ ಬೇಕಾದರೂ ಬೀಸಬಹುದು. ಏನೇ ಆದರೂ ಸುಮಲತಾರವರು ಕಣದಲ್ಲಿರುತ್ತಾರೆ. ಚರ್ಚೆ ನಡೆಸಿ, ಸುಮಲತಾ ಅಂಬರೀಶ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ
ಎಂದು ಸುಮಲತಾ ಆಪ್ತ ಹೇಳಿದ್ದಾರೆ.
ADVERTISEMENT
ADVERTISEMENT