ನೂಪರ್ ಶರ್ಮಾ ಅವರ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ.
ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ರೀತಿಯ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಅಹ್ಮದ್ನಗರ ಜಿಲ್ಲೆಯಲ್ಲಿ ಯುವಕನೊಬ್ಬನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಆರೋಪಿಸಿದ್ದಾರೆ.
10 ರಿಂದ 12 ಮಂದಿ ಮುಸ್ಲಿಂ ಯುವಕರು ಪ್ರತೀಕ್ ಪವಾರ್ ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಕರ್ಜತ್ನಲ್ಲಿ ಗುರುವಾರ ಘಟನೆ ನಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರವಹಿಸಬೇಕು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಆಗ್ರಹಿಸಿದ್ದಾರೆ