ವಾರಣಾಸಿ ನ್ಯಾಯಾಲಯದ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿ ಸರ್ವೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಆರಂಭಿಸಿದೆ.
ಇಂದಿನ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠ ವಾರಣಾಸಿ ನ್ಯಾಯಲಯದ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಹೇಳಿದೆ.
ಹಿಂದೂ ಭಕ್ತರು ಮಸೀದಿಯಲ್ಲಿ ದೇವರ ಕುರುಹುಗಳಿದೆ. ಆದ್ದರಿಂದ ನಮಗೆ ಪೂಜೆ ಮಾಡಲು ಅವಕಾಶ ನೀಡಬೇಕೆಂದು ವಾರನಾಸಿ ನ್ಯಾಯಾಲಯದ ಕದ ತಟ್ಟಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ವಾರಣಾಸಿ ನ್ಯಾಯಾಲಯ ಮಸೀದಿಯಲ್ಲಿ ವೀಡಿಯೋ ಚಿತ್ರೀಕರಣ ಮಾಡಲು ಆದೇಶ ನೀಡಿತ್ತು.
ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ವರದಿಯಾಗಿತ್ತು.
ಈ ಆದೇಶದ ವಿರುದ್ಧ ಒಂದು ಕಡೆ ಮಸೀದಿ ಸಮತಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಅರ್ಜಿಯ ವಿಚಾರನೆ ನಡೆಸಿರುವ ಸುಪ್ರಿಂ ಕೋರ್ಟ್ ವಾರಣಾಸಿ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿದೆ.
ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಮಸೀದಿಯೊಳಗೆ ಶಿವಲಿಂಗ ಪತ್ತೆಯಾಗಿದೆ ಸ್ಥಳವನ್ನು ಸಂರಕ್ಷಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಹಾಗೆಯೇ, ಮಸೀದಿಯಲ್ಲಿ ನಮಾಜ್ ಮತ್ತು ಧಾರ್ಮಿಕ ಆಚರಣೆ ಮಾಡುವ ಮುಸ್ಲಿಮರ ಹಕ್ಕನ್ನು ಇದು ನಿರ್ಬಂಧಿಸಬಾರದು ಎಂದು ಆದೇಶಿಸಿದೆ.
ಇನ್ನು, ವೀಡಿಯೋ ಸರ್ವೆ ನಡೆಸಿದ್ದ ತಂಡ ವಾರಣಾಸಿ ನ್ಯಾಯಾಲಯಕ್ಕೆ 12 ಪುಟಗಳ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ಶಿವಲಿಂಗ ಪತ್ತೆಯಾಗಿರುವುದು ಹಾಗೂ ಇತರೆ 4 ದೇವರ ವಿಗ್ರಹದ ಮಾದರಿಗಳು ಪತ್ತೆಯಾಗಿರುವ ಬಗ್ಗೆಯೂ ಹೇಳಲಾಗಿದೆ ಎಂದು ತಿಳಿದುಬಂದಿದೆ.